ಮೊಬೈಲ್ ಗಾಗಿ ಮಚ್ಚಿನಿಂದ ಹಲ್ಲೆ

Attacked by a mob for mobile in bengaluru

19-01-2018

ಬೆಂಗಳೂರು: ಮೈಸೂರು ರಸ್ತೆಯ ದೀಪಾಂಜಲಿ ನಗರದ ಬಳಿ ಇಂದು ನಸುಕಿನಲ್ಲಿ ಕೆಲಸಕ್ಕೆ ನಡೆದುಕೊಂಡು ಹೊಗುತ್ತಿದ್ದ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರನ್ನು ಸ್ಕೂಟರ್‍ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ಮಚ್ಚಿನಿಂದ ಹಲ್ಲೆ ನಡೆಸಿ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.

ಮಚ್ಚಿನಿಂದ ನಡೆಸಿದ ಹಲ್ಲೆಯಿಂದ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೇಣುಗೋಪಾಲ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕವಿತಾ ಲೇಔಟ್‍ನ ಮೊದಲ ಮುಖ್ಯರಸ್ತೆಯ ಮನೆಯಿಂದ ವೇಣುಗೋಪಾಲ್ ಅವರು ಬೆಳಗ್ಗೆ 5:15ರ ವೇಳೆ ಬಿಡದಿಯಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ಬೆಳಗಿನ ಪಾಳಯದ ಕೆಲಸಕ್ಕಾಗಿ ದೀಪಾಂಜಲಿ ನಗರದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಡಿಯೋ ಸ್ಕೂಟರ್‍ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ಮೊಬೈಲ್ ಕಸಿಯಲು ಯತ್ನಿಸಿದ್ದು ಪ್ರತಿರೋಧ ತೋರಿದ ವೇಣುಗೋಪಾಲ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.

ನಗರದ ಇನ್ನೊಂದೆರಡೆ ಆವಲಹಳ್ಳಿಯ ಬಳಿ ನಿನ್ನೆ ರಾತ್ರಿ 11.50ರ ವೇಳೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಖಾಸಗಿ ಕಂಪನಿಯ ಉದ್ಯೋಗಿ ವೆಂಕಟೇಶ್ ಅವರನ್ನು ಮಚ್ಚು ತೋರಿಸಿ ಬೆದರಿಸಿದ ದುಷ್ಕರ್ಮಿಗಳು ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಸ್ಕೂಟರ್‍ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದು, ಈ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಪೊಲೀಸರು ದುಷ್ಕರ್ಮಿಗಳಿಗಾಗಿ ಶೋಧ ನಡೆಸಿದ್ದಾರೆ.

 

 

 


ಸಂಬಂಧಿತ ಟ್ಯಾಗ್ಗಳು

scooter Robbery ಕಂಪನಿ ಪ್ರತಿರೋಧ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ