ಬಿಜೆಪಿ ನವಶಕ್ತಿ ಯಾತ್ರೆಗೆ ಸಿದ್ಧತೆ...!

karnataka BJP preparing for navashakthi yathre

19-01-2018

ಬೆಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಯ ಉದ್ದೇಶದಿಂದ ಸ್ಥಳೀಯ ವಿಷಯಗಳನ್ನು ಕೇಂದ್ರೀಕರಿಸಿ, ಪ್ರತ್ಯೇಕ ಯಾತ್ರೆಗಳನ್ನು ಸಂಘಟಿಸಲು ಬಿಜೆಪಿ ತೀರ್ಮಾನಿಸಿದೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ, ಬೂತ್ ಸಶಕ್ತೀಕರಣಕ್ಕೆ ಗುರ್ತಿಸಲಾಗಿರುವ 19 ಅಂಶಗಳನ್ನು ಆಧರಿಸಿ, ಎಲ್ಲ ಕ್ಷೇತ್ರಗಳಲ್ಲಿ ಫೆ.20ರೊಳಗೆ ನವಶಕ್ತಿ ಸಮಾವೇಶಗಳನ್ನು ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪರಿವರ್ತನಾ ಯಾತ್ರೆ ಈಗಾಗಲೇ 199 ವಿಧಾನಸಭಾ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಬಿಜೆಪಿ ಪ್ರಾಬಲ್ಯವಿರದೇ ಇರುವ ಕ್ಷೇತ್ರಗಳಲ್ಲೂ ದೊರಕಿರುವ ಭಾರೀ ಜನಬೆಂಬಲವನ್ನು ವಿಶೇಷವಾಗಿ ಸಭೆಯಲ್ಲಿ ಗಂಭೀರವಾಗಿ ಪರಿಗಣಿಸಲಾಗಿದೆ. ಮುಂಬರುವ ದಿನಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ರೈತರು, ಮಹಿಳೆಯರು ಹಾಗೂ ಯುವಕರ ಪ್ರತ್ಯೇಕ ಸಮಾವೇಶಗಳನ್ನು ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ರಾಜ್ಯದ ಹದಗೆಟ್ಟ ಕಾನೂನು ಸುವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

BJP Nava shakti ಚುನಾವಣೆ ರೈತರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ