ಕೌಟುಂಬಿಕ ಕಲಹ:ದಂಪತಿ ಆತ್ಮಹತ್ಯೆ

Husband and wife hang suicide in belagavi

20-01-2018

ಬೆಳಗಾವಿ: ಕೌಟುಂಬಿಕ ಕಲಹ ಹಿನ್ನೆಲೆ ನೇಣು ಬಿಗಿದುಕೊಂಡು ಗಂಡ-ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯು, ಬೆಳಗಾವಿಯಲ್ಲಿ ನಡೆದಿದೆ. ರವಿ.ಆರ್.ರಾಥೋಡ(25), ಅಂಜಲಿ (24) ಮೃತ ದಂಪತಿ ಎಂದು ಗುರುತಿಸಲಾಗಿದೆ. ಜಿಲ್ಲೆಯ ಸಿಂದಗಿ ತಾಲ್ಲೂಕಿನ ಹಲತಗಾ ಗ್ರಾಮದ ಘೋಡಗೇರಿ ತಾಂಡದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಳೆದ ಕೆಲದಿನಗಳಿಂದ ದಂಪತಿ ಮಧ್ಯೆ ಕ್ಷುಲ್ಲಕ ಕಾರಣಗಳಿಗಾಗಿ ಜಗಳ ನಡಯುತ್ತಿದ್ದು, ನಿನ್ನೆ ರಾತ್ರಿ ಜಗಳ ವಿಕೋಪಕ್ಕೆ ತಿರುಗಿದ್ದು, ಇದರಿಂದ ಮನನೊಂದ ಅಂಜಲಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನು ನೋಡಿದ ಪತಿ ರವಿ ಹೆದರಿ ತಾನೂ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

suicide Family ದಂಪತಿ ವಿಕೋಪ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ