ಹೊತ್ತಿ ಉರಿದ 5 ಕಾರುಗಳು

fire accident garage 5 cards damaged

20-01-2018

ಮೈಸೂರು: ಕಾರ್ ಗ್ಯಾರೇಜ್ಗೆ ಆಕಸ್ಮಿಕ ಬೆಂಕಿ ತಗುಲಿ, 5 ಕಾರುಗಳು ಹಾಗೂ 3 ಮರದ ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಎನ್.ಆರ್.ಮೊಹಲ್ಲಾದ ಟಿಪ್ಪು ಸರ್ಕಲ್ ಬಳಿಯ ಗ್ಯಾರೇಜ್ ನಲ್ಲಿ ರಿಪೇರಿಗೆ ಬಿಡಲಾಗಿದ್ದ 5ಕ್ಕೂ ಹೆಚ್ಚು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಅಲ್ಲದೇ ಪಕ್ಕದಲ್ಲೇ ಇದ್ದ ಅಂಗಡಿಗಳಿಗೂ ಬೆಂಕಿ ಆವರಿಸಿದೆ. ಘಟನೆಯಿಂದ ಲಕ್ಷಾಂತರ ರೂ.ಮೌಲ್ಯದ ಹಳೇ ಮರಗಳು, ಕಾರುಗಳು ಸುಟ್ಟು ಭಸ್ಮವಾಗಿವೆ. ನಿನ್ನೆ ಮಧ್ಯರಾತ್ರಿ ಸುಮಾರು 2.30ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರ ಮಾಹಿತಿಯನ್ನಾಧರಿಸಿ ಸ್ಥಳಕ್ಕಾಗಮಿಸಿದ 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಇಡೀ ರಾತ್ರಿ ಬೆಂಕಿ ನಂದಿಸುವ ಕಾರ್ಯ ಮುಂದುವರಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎನ್.ಆರ್.ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

fire accident mysore ಅಂಗಡಿ ಗ್ಯಾರೇಜ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ