‘ಬಿಜೆಪಿಯವರದು ಕೋಮುವಾದದ ಅಜೆಂಡಾ’22-01-2018

ಬೆಳಗಾವಿ: ಬಿಜೆಪಿಯ ಅಜಂಡಾ ಕೋಮುವಾದದ ಅಜಂಡಾ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿ ಮಾಡಿ, ರಾಜ್ಯದಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಇವರಿಗೆ ಅಭಿವೃದ್ಧಿ, ಶಾಂತಿ ಬೇಕಾಗಿಲ್ಲ ಎಂದು ಪರಮೇಶ್ವರ್ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿಂದು ಮಾತನಾಡಿದ ಅವರು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಪರಿವರ್ತನಾ ರ‍್ಯಾಲಿಯಲ್ಲಿ ಜೈಲಿಗೆ ಹೋಗಿದ್ದು ಮರೆಮಾಚಿ, ನಾವು ಪರಿವರ್ತನೆಯಾಗಿದ್ದೇವೆ ಎಂದು ಜನರ ಮುಂದೆ ಹೇಳಲು ಹೊರಟಿದೆ ಎಂದು ಭಾವಿಸಿಕೊಳ್ಳ ಬೇಕಾಗುತ್ತದೆ. ಕಾಂಗ್ರೆಸ್ ಸರಕಾರ ರಾಜ್ಯದ ಜನತೆಗೆ ಸಾಕಷ್ಟು ಯೋಜನೆಗಳನ್ನು ನೀಡಿದೆ. ಬಿಜೆಪಿಯವರ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು, ಕೇಂದ್ರದಲ್ಲಿ  ಪ್ರಧಾನಿ ಮೋದಿಯವರು ಹೇಳಿದ ಸುಳ್ಳನ್ನು ರಾಜ್ಯದ ಚುನಾವಣೆಯ ಸಂದರ್ಭದಲ್ಲಿ ಜನರ ಮುಂದೆ ಇಡುತ್ತೇವೆ ಎಂದರು.

 ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ಇದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದಾಗಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸ್ವಚ್ಚ ಆಡಳಿತ ನಡೆಸಿದೆ, ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

G.Parameshwara KPCC ಅಮಿತ್ ಷಾ ಪ್ರಧಾನಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ