ಮಿನಿ ಬಸ್ ಪಲ್ಟಿ

over load mini Bus fell down

22-01-2018

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಗಾರ್ಮೆಂಟ್ಸ್ ಬಸ್ ಉರುಳಿಬಿದ್ದು ಸುಮಾರು 10 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಕನಕೇನಹಳ್ಳಿ ಬಳಿ ಸಿಲ್ವರ್ ಪಾರ್ಕ್ ಗಾರ್ಮೆಂಟ್ಸ್ ಸೇರಿದ ಮಿನಿ ಬಸ್ ಉರುಳಿಬಿದ್ದಿದೆ. ಘಟನೆಯಲ್ಲಿ ಮಿನಿ ಬಸ್ ನಲ್ಲಿದ್ದ 10 ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಿನಿ ಬಸ್ಸಿನ ಸಾಮರ್ಥ್ಯ ಮೀರಿ ಬಸ್ ನಲ್ಲಿ 60ಕ್ಕೂ ಹೆಚ್ಚು ಜನರಿದ್ದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

mini Bus garments ಅವಘಡ ಗ್ರಾಮಾಂತರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ