ಜನಾರ್ದನ ರೆಡ್ಡಿಗೆ ಮತ್ತೆ ಹಿನ್ನಡೆ

Sc: refueses Janardhana Reddy requests

22-01-2018

ಚುನಾವಣಾ ರಾಜಕೀಯದಲ್ಲಿ ಸಕ್ರಿಯವಾಗಲು ಗಾಲಿ ಜನಾರ್ದನ ರೆಡ್ಡಿ ಪ್ರಯತ್ನ ಮತ್ತೆ ವಿಫಲವಾಗಿದೆ. ಈ ಕುರಿತಂತೆ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಜನಾರ್ದನ ರೆಡ್ಡಿಗೆ ಷರತ್ತು ಸಡಿಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಬಳ್ಳಾರಿ ಮತ್ತು ಅನಂತಪುರ ಜಿಲ್ಲೆಗೆ ತೆರಳದಂತೆ ಜಾಮೀನು ನೀಡಿದ್ದ ವೇಳೆ ಕೋರ್ಟ್ ಷರತ್ತು ವಿಧಿಸಿತ್ತು. ಈ ಸಂಬಂಧ ಷರತ್ತು ಸಡಿಲಿಸುವಂತೆ ಕೋರಿ, ಜನಾರ್ದನ ರೆಡ್ಡಿ ಅರ್ಜಿ ಸಲ್ಲಿಸಿದ್ದರು. ಅದರಂತೆ ಅರ್ಜಿ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಷರತ್ತು ಸಡಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿ ಆದೇಶಿಸಿದೆ.


ಸಂಬಂಧಿತ ಟ್ಯಾಗ್ಗಳು

Janardhana Reddy Supreme Court ರಾಜಕೀಯ ವಿಫಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ