‘ರಾಜಕೀಯ ಲಾಭವೇ ಕಾಂಗ್ರೆಸ್ ಉದ್ದೇಶ’22-01-2018

ಬೆಂಗಳೂರು: ಮಹದಾಯಿ ಜಲವಿವಾದವನ್ನು ಪರಸ್ಪರ ಸೌಹಾರ್ದಯುತವಾಗಿ ಬಗೆಹರಿಸುವಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಜಲವಿವಾದ ಬಗೆಹರಿಯುವುದು ಕಾಂಗ್ರೆಸ್ ಮುಖಂಡರಿಗೆ ಬೇಕಾಗಿಲ್ಲ. ಸಮಸ್ಯೆಯನ್ನು ಜೀವಂತವಾಗಿಟ್ಟು ರಾಜಕೀಯ ಲಾಭ ಪಡೆಯುವುದೇ ಅವರ ಉದ್ದೇಶವಾಗಿದೆ ಎಂದರು. ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರು ಈ ವಿಚಾರದಲ್ಲಿ ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಶೆಟ್ಟರ್ ಆಗ್ರಹಿಸಿದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ