ಅತ್ಯಾಚಾರ: ಮುದುಕನಿಗೆ 7 ವರ್ಷ ಕಠಿಣ ಶಿಕ್ಷೆ

Rape case: court ordered 7 years rigorous imprisonment

23-01-2018

ತುಮಕೂರು: ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಾತನಿಗೆ 7 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಕೇವಲ 6 ತಿಂಗಳಲ್ಲಿ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ಈ ತೀರ್ಪು ನೀಡಿದೆ. ಪ್ರಕರಣವು 2016ರಲ್ಲಿ ನಡೆದಿತ್ತು. ರಮೇಶ್ ಎಂಬಾತ ವಸತಿ ಶಾಲೆಯಿಂದ ಮೊಮ್ಮಗಳನ್ನ ಕರೆದೊಯ್ದು ಲಾಡ್ಜ್ ಒಂದರಲ್ಲಿ  ಲೈಂಗಿಕ ದೌರ್ಜನ್ಯ ಎಸಗಿದ್ದ. ಅದಲ್ಲದೇ ಅದನ್ನು ವಿಡಿಯೋ ಮಾಡಿಕೊಂಡು ಬಾಲಕಿಗೆ ಹೆದರಿಸುತ್ತಿದ್ದ. ಈ ಕುರಿತಂತೆ 2017ರಲ್ಲಿ ಯುವತಿಯ ತಾಯಿ ಮಹಿಳಾ ಠಾಣೆಗೆ ದೂರು ನೀಡಿದ್ದರು. ಮಹಿಳಾ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ  ಮದುಕನನ್ನು ಅರೆಸ್ಟ್ ಮಾಡಿ, ವೇಗವಾಗಿ ಚಾರ್ಜ್ ಶೀಟ್ ದಾಖಲಿಸಿದ್ದರು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಪ್ರಕರಣವನ್ನು ಕೈಗೆತ್ತಿಕೊಂಡು ವಿಚಾರಣೆ ನಡೆಸಿ ಕೇವಲ 6 ತಿಂಗಳಲ್ಲಿ ತೀರ್ಪು ನೀಡಿದೆ. ಮುದುಕನಿಗೆ 7 ವರ್ಷ ಕಠಿಣ ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿ ಆದೇಶಿಸಿದೆ.


ಸಂಬಂಧಿತ ಟ್ಯಾಗ್ಗಳು

Court Rape ಕಠಿಣ ಅರೆಸ್ಟ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ