ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಕೊಲೆ

trivial reason: A man murdered

23-01-2018

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಜಗಳ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯವಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯು ಬಾಗಲಕೋಟೆಯಲ್ಲಿ ನಡೆದಿದೆ. ಮುಸುರೆ ಚೆಲ್ಲುವ ವಿಚಾರಕ್ಕೆ ಎರಡು ಕುಟುಂಬದ ನಡುವೆ ಜಗಳ ನಡೆದಿದ್ದು, ವ್ಯಕ್ತಿಯೊಬ್ಬರ ಕೊಲೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲ್ಲೂಕಿನ ಕಟಗಿನಹಳ್ಳಿ ಗ್ರಾಮದಲ್ಲಿ ಜನವರಿ 19ರಂದು ಈ ದುರ್ಘಟನೆ ನಡೆದಿದೆ. ವಿಗ್ನೇಶಪ್ಪ ಗೌಡರ್(60) ಮೃತ ವ್ಯಕ್ತಿ. ಜಗಳದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿಗ್ನೇಶಪ್ಪ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನು ಪ್ರಕರಣ ಸಂಬಂಧ ಆರೋಪಿಗಳಾದ ಧಾಮಸಪ್ಪ ಗೌಡರ್, ಚವರಪ್ಪ ಗೌಡರ್ ಎಂಬುವರನ್ನು ಬಂಧಿಸಲಾಗಿದೆ. ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

murder treatement ಬಾದಾಮಿ ಕ್ಷುಲ್ಲಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ