ಹುಲಿ ಚರ್ಮ ವಶ: ಮೂವರ ಬಂಧನ

Tiger skin and 3 detention in bengaluru

23-01-2018

ಬೆಂಗಳೂರು: ಬೆಂಗಳೂರಿನ ಉತ್ತರ ವಿಭಾಗದ ಆರ್.ಎಂ.ಸಿ ಯಾರ್ಡ್ ಪೊಲೀಸರು ಕಾರ್ಯಾಚರಣೆ ನಡೆಸಿ, ಹುಲಿ ಚರ್ಮ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಬಾಲಕೃಷ್ಣ, ಮಹೇಶ್,ರಂಗರಾಜ್ ಬಂಧಿತ ಆರೋಪಿಗಳು. ಬಂಧಿತರಿಂದ ಲಕ್ಷಾಂತರ ಮೌಲ್ಯದ ಹುಲಿ ಚರ್ಮ ಹಾಗು ಇನ್ನಿತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಸತ್ಯಮಂಗಲದಿಂದ ನಗರಕ್ಕೆ ಬಂದಿದ್ದ ಆರೋಪಿಗಳು, ಯಶವಂತಪುರದ ಬಳಿ ಹುಲಿ ಚರ್ಮ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿಯನ್ನಾಧರಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳ ಬಂಧನದಿಂದ ಸುಮಾರು 40 ಲಕ್ಷ ಮೌಲ್ಯದ ಹುಲಿ ಚರ್ಮ, ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ತಮಿಳುನಾಡಿನ ಸತ್ಯಮಂಗಲ ಕಾಡಿನಲ್ಲಿ ಹುಲಿ ಭೇಟೆಯಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ರಾಷ್ಟ್ರೀಯ ಪ್ರಾಣೆಯಾಗಿರುವ ಹುಲಿ ಚರ್ಮ ಹಾಗೂ ಉಗುರು ಅಪರೂಪದಲ್ಲಿ ಅಪರೂಪ, ವಿದೇಶದಲ್ಲಿ ಹುಲಿ ಚರ್ಮಕ್ಕೆ ಭಾರೀ ಬೇಡಿಕೆ ಇದೆ. ಹುಲಿ ಚರ್ಮ ಮಾರಿ ಲಕ್ಷಾಂತರ ರೂಪಾಯಿ ಸಂಪಾದಿಸುವ ಪ್ಲಾನ್ ಮಾಡಿದ್ದ ಆರೋಪಿಗಳು ಇದೀಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Tiger RMC yard ಉಗುರು ಲಕ್ಷಾಂತರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ