ಮೈಸೂರಿನಲ್ಲಿ ವರನಟ ಡಾ.ರಾಜ್‌ಕುಮಾರ್‌ರವರ 89ನೇ ಹುಟ್ಟುಹಬ್ಬ ಆಚರಣೆ

Kannada News

24-04-2017

ಮೈಸೂರು: ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರನಟ ಡಾ.ರಾಜ್‌ಕುಮಾರ್‌ರವರ 89ನೇ ಹುಟ್ಟುಹಬ್ಬ ಆಚರಣೆ ಹಿನ್ನೆಲೆ ಮೈಸೂರಿನ ಅರಮನೆ ಸನಿಹದಲ್ಲಿರುವ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿ ಡಾ.ರಾಜ್ ಕುಮಾರ್ ಪುತ್ಥಳಿಗೆ ಮಾರ್ಲಾಪಣೆ ಮಾಡಿ ಅಭಿಮಾನಿಗಳು ಗೌರವ ಸಲ್ಲಿಸಿದರು. ರಾಜ್‌ಕುಮಾರ್ ಅಭಿಮಾನಿಗಳ ಸಂಘ, ಶಿವರಾಜ್‌ಕುಮಾರ್ ಅಭಿಮಾನಿಗಳ ಸಂಘ, ಪುನಿತ್‌ರಾಜ್‌ಕುಮಾರ್ ಅಭಿಮಾನಿಗಳ ಸಂಘದಿಂದ ರಾಜ್‌ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಡೊಳ್ಳುಕುಳಿತ, ತಮಟೆ ನಗಾರಿ, ವೀರಗಾಸೆ ತಂಡಗಳೊಂದಿಗೆ ಡಾ. ರಾಜಕುಮಾರ್ ಭಾವಚಿತ್ರದ ಮೆರವಣಿಗೆ ಮಾಡಲಾಗಯಿತು. ಹಾರ ತೂರಾಯಿ ಹಿಡಿದು ಅಭಿಮಾನಿಗಳು ಸಂಭ್ರಮಿಸಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಸ್ಥಳಿಯ ಜನಪ್ರತಿನಿಧಿಗಳು ಭಾಗಿಯಾದರು. ಸಾರ್ವಜನಿಕರಿಗೆ ಸಿಹಿ ಹಂಚಿ,ಪಟಾಕಿಗಳನ್ನು ಸಿಡಿಸಿ ಡಾ. ರಾಜ್  ಅಭಿಮಾನಿಗಳು ಸಂಭ್ರಮದ ಹುಟ್ಟುಹಬ್ಬವನ್ನು ಆಚರಿಸಿದರು.                       

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ