ಡಿವೈಡರ್ ಗೆ ಬೈಕ್ ಡಿಕ್ಕಿ ಸವಾರ ಸಾವು

biker hit divider spot dead in bengaluru

23-01-2018

ಬೆಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರು ಘಟನೆ ನಗರದಲ್ಲಿ ನಡೆದಿದೆ. ರವಿಕುಮಾರ್(35) ಮೃತ ಬೈಕ್ ಸವಾರ. ಈತ ಸುಕಂದಕಟ್ಟೆ ನಿವಾಸಿ ಎಂದು ತಿಳಿದು ಬಂದಿದೆ. ಮುಂಜಾನೆ 5 ಗಂಟೆಯಲ್ಲಿ ನಾಗರಾಬಾವಿ ರಿಂಗ್ ರೋಡ್ ನಲ್ಲಿ ಹೋಗುತ್ತಿದ್ದಾಗ ಅಂಬೇಡ್ಕರ್ ಕಾಲೇಜು ಬಳಿ ಡಿವೈಡರ್ ಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುವ ಆತುರದಲ್ಲಿ ಅತಿವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ಬಂದಿದ್ದು, ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾರೆ. ಅದಲ್ಲದೇ ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡಿಕೊಂಡು ಬಂದಿದ್ದರೆಂದು ತಿಳಿದು ಬಂದಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ