ಅನಂತಕುಮಾರ್ ಹೆಗಡೆ ಪ್ರತಿಕೃತಿಗೆ ಬೆಂಕಿ

Ananthakumar Hegde

23-01-2018

ಬಾಗಲಕೋಟೆ: ದಲಿತರನ್ನು ನಾಯಿಗೆ ಹೋಲಿಸಿದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ, ಬಾಗಲಕೋಟೆಯಲ್ಲಿ ಕಾಂಗ್ರೆಸ್ ದಲಿತ ಸಮಿತಿಯಿಂದ ಡಿಸಿ‌ ಕಚೇರಿ ಎದುರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಸಂವಿಧಾನ ವಿರೋಧಿ, ದಲಿತ ವಿರೋಧಿ ಅನಂತ್ ಕುಮಾರ್ ಹೆಗಡೆಗೆ ಧಿಕ್ಕಾರ ಎಂದು ಕೂಗಿಕೊಂಡು ಪ್ರತಿಭಟಿಸಿದ್ದಾರೆ. ಇನ್ನು ಸಚಿವ ಅನಂತ್ ಕುಮಾರ್ ಹೆಗಡೆ ಪ್ರತಿಕೃತಿ ದಹಿಸಿ, ಅವರ ಭಾವ ಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿದ ದಲಿತ ಸಮಿತಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಂತರದಲ್ಲಿ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ