ಕಾರು ಡಿಕ್ಕಿ ಪಾದಾಚಾರಿ ಸಾವು

Accident: pedestrian died

23-01-2018

ಬೆಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ನೆಲಮಂಗಲದಲ್ಲಿ ನಡೆದಿದೆ. ಸ್ವಾಮಿ (75) ಮೃತ ದುರ್ದೈವಿ. ನೆಲಮಂಗಲ ಸಮೀಪದ ದಾಸನಪುರ ಬಳಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವೇಗವಾಗಿ ಬರುತ್ತಿದ್ದ ಕಾರು ಏಕಾಏಕಿ ಪಾದಾಚಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ವಾಮಿ ಸ್ಥಳದಲ್ಲೇ ಮರಣಕ್ಕೀಡಾಗಿದ್ದಾರೆ. ಇನ್ನು ಕಾರು ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Accident pedestrian ದುರ್ದೈವಿ ರಾಷ್ಟ್ರೀಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ