ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ...!

fight between BJP activists and congress activists

24-01-2018

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂ ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಕಾರ್ಯಕರ್ತರ ಮೇಲೆ ನಿನ್ನೆ ರಾತ್ರಿ ಹಲ್ಲೆ ನಡೆದಿರುವುದು ಬೆಳಕಿಗೆ ಬಂದಿದೆ. ರಾಮಮೂರ್ತಿ ನಗರದ ಮುನೇಶ್ವರ ನಗರದ ಬಳಿ ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ನುಗ್ಗಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಾರಿ ಬಿಜೆಪಿ ಎಂಬ ಗೋಡೆ ಬರಹ ಬರೆದಿದ್ದು, ಇದರಿಂದ ಶಾಸಕ ಭೈರತಿ ಬಸವರಾಜ್ ಬೆಂಬಲಿಗರು ಮತ್ತು ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಘಟನೆ ಸಂಬಂಧ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೊನ್ನೆಯಷ್ಟೆ ಇದೇ ರೀತಿಯ ಘಟನೆ ಕೆ.ಆರ್.ಪುರಂನಲ್ಲಿ ನಡೆದಿತ್ತು.


ಸಂಬಂಧಿತ ಟ್ಯಾಗ್ಗಳು

Byrathi basavaraj party workers ಗೋಡೆ ಬರಹ ಬೆಂಬಲಿಗ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ