ಮಹಿಳೆಯನ್ನು ಮಂಚಕ್ಕೆ ಕರೆದ ವೈದ್ಯ

sexual harrasment on women patient doctor arrested

24-01-2018

ಬೆಂಗಳೂರು: ಚಿಕಿತ್ಸೆಗೆ ಬಂದ ಮಹಿಳಾ ರೋಗಿಯೊಂದಿಗೆ ವೈದ್ಯನೊಬ್ಬ ಅಸಭ್ಯ ವರ್ತನೆ ತೋರಿದ್ದು, ಆತನ ವಿರುದ್ಧ ದೂರು ದಾಖಲಾಗಿದೆ. ಘಟನೆಯು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಅಂಜನಾನಗರದ ಶಿವ ಕ್ಲಿನಿಕ್ ವೈದ್ಯ ಬಿ.ಶಿವರಾಮ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. 

ನಿನ್ನೇ ರಾತ್ರಿ ಸುಮಾರು 8 ಗಂಟೆಯಲ್ಲಿ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಶಿವ ಕ್ಲಿನಿಕ್ ಗೆ ಬಂದಿದ್ದಾರೆ. ಈ ವೇಳೆ ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳೆಯ ಮೇಲೆ ಡಾಕ್ಟರ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಡಾಕ್ಟರ್ ನ ಅಸಭ್ಯವರ್ತನೆಯಿಂದ ಗಾಭರಿಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಕೂಗಿಕೊಂಡಿದ್ದಾರೆ. ಮಹಿಳೆಯ ಕೂಗಾಟ ಕೇಳಿ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಮಹಿಳೆಗೆ ಮುತ್ತು ಕೊಟ್ಟು ಮಂಚಕ್ಕೆ ಕರೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ.

ವೈದ್ಯನ ದುರ್ವರ್ತನೆ ವಿರುದ್ಧ ಮಹಿಳೆಯು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡು ಪೊಲೀಸರು ಕಾರ್ಯಾಚರಣೆ ಕೈಗೊಂಡು ಅರೋಪಿ ವೈದ್ಯ ಶಿವರಾಮ್ ಅವರನ್ನು ಅರೆಸ್ಟ್ ಮಾಡಿದ್ದಾರೆ.

ಬ್ಯಾಡರಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಮೂವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ವೈದ್ಯ ಶಿವರಾಮ್, ಸ್ಥಳೀಯರ ಒತ್ತಾಯದ ಮೇರೆಗೆ ಕ್ಲಿನಿಕ್ ನಡೆಸುತ್ತಿದ್ದರು ಎಂದೆನ್ನಲಾಗಿದೆ. ಸ್ಥಳೀಯವಾಗಿ ತುಂಬಾ ಹೆಸರು ಗಳಿಸಿದ್ದು, ಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಇದರಿಂದಲೇ ಸಾರ್ವಜನಿಕ ವಲಯದಲ್ಲಿ ಒಳ್ಳೆ ಹೆಸರು ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಇನ್ನು ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ