ಬೆಂಗಳೂರಲ್ಲಿ ಪೊಲೀಸ್ ಬಿಗಿ ಭದ್ರತೆ

High police protection in bengaluru

24-01-2018

ಬೆಂಗಳೂರು: ನಾಳೆ ಕರ್ನಾಟಕ  ಬಂದ್ ಹಿನ್ನೆಲೆ, ಸಿಲಿಕಾನ್ ಸಿಟಿಗೆ ಬಿಗಿ ಬಂದೋ ಬಸ್ತ್ ಮಾಡಲಾಗಿದ್ದು, ಸಾರ್ವಜನಿಕರಿಗೆ ತೊಂದರೆ ಆಗದಂತೆ ನಿಗಾವಹಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಮಹಾದಾಯಿ ವಿಚಾರದಲ್ಲಿ ಯಾವಾಗಲೂ ನಮ್ಮ ಬೆಂಬಲ ಇರುತ್ತದೆ. ಬಂದ್ಗೆ ಸರ್ಕಾರದ ಕುಮ್ಮಕ್ಕು ಇದೆ ಎಂದು ಬಿಜೆಪಿ ಹೇಳುತ್ತಿದೆ, ಅವರದು ರಾಜಕೀಯ ಪ್ರೇರಿತ ಆರೋಪ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಇನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಮಾತನಾಡಿ, ನಗರದಲ್ಲಿ 15 ಸಾವಿರ ಪೊಲೀಸರ ನಿಯೋಜಿಸಲಾಗಿದೆ. 50 ಕೆ.ಎಸ್.ಆರ್.ಪಿ ಹಾಗೂ ಸೆಂಟ್ರಲ್ ಆರ್ಮ್ ಫೋರ್ಸ್ ತುಕಡಿಗಳನ್ನು ನೇಮಿಸಲಾಗಿದೆ. ಯಾವ ಸಿಬ್ಬಂದಿಗೂ ರಜೆ ನೀಡಿಲ್ಲಾ ನಾಳೆ ಎಲ್ಲಾ ಪೊಲೀಸರು ಡ್ಯೂಟಿಗೆ ಹಾಜರಾಗಲೇ ಬೇಕು ಎಂದು ಇಲಾಖೆ ಸೂಚಿಸಿದೆ. ಇನ್ನು ನಾಳೆ ಬಲವಂತವಾಗಿ ಬಂದ್ ಮಾಡಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ರೌಡಿ ಶೀಟರ್ಗಳನ್ನು ಠಾಣೆಗೆ ಕರೆತಂದು ವಾರ್ನಿಂಗ್ ಮಾಡಿ ಕಳುಹಿಲಾಗಿದೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ