‘ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳ ಒತ್ತಡ’24-01-2018

ಬೆಂಗಳೂರು: ಪಿಜಿ ವೈದ್ಯಕೀಯ ಕೋರ್ಸ್ಗಳಿಗೆ ಡೀಮ್ಡ್ ವಿವಿ ಹಾಗೂ ಖಾಸಗಿ ಕಾಲೇಜುಗಳು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದು, ಶೇ.200 ರಿಂದ 300ರಷ್ಟು ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳು ಒತ್ತಾಯ ಮಾಡುತ್ತಿವೆ ಎಂದು, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲಾಗುದೆಂದು ತಿಳಿಸಿದ್ದಾರೆ.

ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಜೊತೆಗೆ ಮತ್ತೊಮ್ಮೆ ಮಾತುಕತೆ ನಡೆಸಲಾಗುವುದು, ಈಗ ಪಿಜಿ ಕೋರ್ಸ್ಗಳಿಗೆ 6 ಲಕ್ಷ ರೂ.ಪ್ರವೇಶ ಶುಲ್ಕವಿದೆ, ಖಾಸಗಿ ಅವರು ಸುಮಾರು 24 ಲಕ್ಷ ರೂ. ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ, ಅವರು ಕೇಳಿದಾಕ್ಷಣ ಶುಲ್ಕ ಹೆಚ್ಚಳ ಸಾಧ್ಯವಿಲ್ಲ, ವಿದ್ಯಾರ್ಥಿ ಸ್ನೇಹಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ