ರೈಲ್ವೆ ನಿಲ್ದಾಣದೆದುರು ಕರವೇ ಪ್ರತಿಭಟನೆ

KRV protest in front of the railway station chamarajanagar

25-01-2018

ಚಾಮರಾಜನಗರ: ಮಹದಾಯಿ ನೀರಿಗಾಗಿ ಕರ್ನಾಟಕ ಬಂದ್ ಹಿನ್ನೆಲೆ, ಚಾಮರಾಜನಗರ ಜಿಲ್ಲೆಯಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಚಾಮರಾಜನಗರದಲ್ಲಿ ರೈಲು ಸಂಚಾರ ತಡೆಯಲು ಮುಂದಾದ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಇದರಿಂದ ರೈಲ್ವೆ ನಿಲ್ದಾಣದ ಹೊರಗೆ ನಿಂತು ಪ್ರತಿಭಟನೆ ಮಾಡಿದ ಕಾರ್ಯ ಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೇಂದ್ರ ಸರ್ಕಾರ ಮಹದಾಯಿ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಆಗ್ರಹಿಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ