ಬಸ್ ಗಳಿಲ್ಲದೇ ಪ್ರಯಾಣಿಕರ ಪರದಾಟ

Passenger fate without a bus

25-01-2018

ಚಿಕ್ಕಮಗಳೂರು: ಮಹದಾಯಿ ಹೋರಾಟಕ್ಕೆ ಕನ್ನಡ ಪರ ಸಂಘಟನೆಗಳು ಬೆಂಬಲಿಸಿ ಇಂದು ನೀಡಿರುಬವ ಕರ್ನಾಟಕ ಬಂದ್ ಹಿನ್ನೆಲೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜ್ಯ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿಕ್ಕಮಗಳೂರಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಗಳು ,ಖಾಸಗಿ ಬಸ್ ಸೇರಿದಂತೆ ಆಟೋ ಸಂಚಾರ ಸ್ಥಗಿತಗೊಂಡಿದೆ. ಬಂದ್ ವಿಚಾರ ತಿಳಿಯದೆ ಪ್ರಯಾಣ ಬೆಳೆಸಿದ್ದ ಪ್ರಯಾಣಿಕರು ಬಸ್ಗಳಿಲ್ಲದೇ ಸಮಸ್ಯೆ ಗುರಿಯಾಗಿದ್ದಾರೆ.

ಬೆಳಿಗ್ಗೆಯಿಂದಲೇ ಬೆಂಗಳೂರು, ಧರ್ಮಸ್ಥಳ, ಮಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರ ಪರದಾಡುವಂತಾಗಿದೆ. ಬಂದ್ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ