ಗೋವಾ ಸರ್ಕಾರದ ವಿರುದ್ಧ ಅಕ್ರೋಶ

protest against goa government in davangere

25-01-2018

ದಾವಣಗೆರೆ: ಮಹದಾಯಿ ವಿಚಾರವಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಕೆಲವೆಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ದಾವಣಗೆರೆ ಜಿಲ್ಲೆಯ ತಾಲ್ಲೂಕು ಪ್ರದೇಶಗಳಲ್ಲೂ ಬಂದ್ ಬಿಸಿ ಇಲ್ಲ. ಜಗಳೂರು, ಹರಪನಹಳ್ಳಿ, ಹೊನ್ನಾಳಿ, ಚನ್ನಗಿರಿ, ಹರಿಹರ ತಾಲ್ಲೂಕುಗಳಲ್ಲಿ ಮಾತ್ರ ಪ್ರತಿಭಟನೆಗಳನ್ನು ನಡೆಸಿ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಇನ್ನುಳಿದ ತಾಲ್ಲೂಕುಗಳಲ್ಲಿ ಬಸ್ ಗಳ ಓಡಾಟ ಸಹಜವಾಗಿದೆ. ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ಯಥಾಸ್ಥಿತಿಯಲ್ಲಿದೆ.

ಇನ್ನು ಜಿಲ್ಲೆಯ ಸುವರ್ಣ ಕರ್ನಾಟಕ ವೇದಿಕೆ ಪ್ರತಿಭಟನೆ ನಡೆಸಿದ್ದು, ದಾವಣಗೆರೆಯ ಜಯದೇವ ಸರ್ಕಲ್ ಬಳಿಯಲ್ಲಿ ಸುವರ್ಣ ಕರ್ನಾಟಕ ಕಾರ್ಯಕರ್ತರು, ಉರುಳು ಸೇವೆ ಮಾಡಿ ಪ್ರತಿಭಟಿಸಿದ್ದಾರೆ. ಮಹಾದಾಯಿ ಸಮಸ್ಯೆ ಇತ್ಯರ್ಥ ಪಡಿಸುವಂತೆ ಉರುಳು ಸೇವೆ ಮಾಡಿ, ಗೋವಾ ಮುಖ್ಯಂತ್ರಿ ಮನೋಹರ್ ಪರಿಕ್ಕರ್ ಪ್ರತಿಕೃತಿ ದಹನ ಮಾಡಿ, ಗೋವಾ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

protest kannada organisation ಸರ್ಕಲ್ ವಹಿವಾಟು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ