ಪ್ರತಿಭಟನೆ: ‘ಚಹಾ ಮಾಡಲು ನೀರು ಬೇಕು’

Burnt replica of narendra modi modi and Protest

25-01-2018

ಹುಬ್ಬಳ್ಳಿ: ಮಹದಾಯಿ ನೀರಿಗಾಗಿ ಕರ್ನಾಟಕ ಬಂದ್ ಹಿನ್ನೆಲೆ, ಬಳ್ಳಾರಿಯ ಹೊಸೂರು ಕ್ರಾಸ್ ಬಳಿ ಚಹಾ ಮಾರಾಟದ ಅಣಕು ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಖಾಲಿ ಚಹಾ ಕಿಟ್ ಹಿಡಿದುಕೊಂಡು ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು, ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ಮುಂದೆ ಬಾಯಿ ಬಾಯಿ ಬಡಿದುಕೊಂಡ ಪ್ರತಿಭಟಿಸಿದ್ದಾರೆ. ಚಹಾ ಮಾಡಬೇಕೆಂದರೆ ನೀರು ಬೇಕು ಮೋದಿ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ನರೇಂದ್ರ ಮೋದಿ ಹೇಳಿದ್ದೇನು, ಮಾಡಿದ್ದೇನು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ನರೇಂದ್ರ ಮೋದಿ ಪ್ರತಿಕೃತಿಗೆ ಬೆಂಕಿ ಹಚ್ಚಿ, ಕೇಂದ್ರ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿಕೊಂಡರು. ಅಲ್ಲದೇ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Narendra modi Tea ಬಿಜೆಪಿ ಅಸಮಾಧಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ