ಕಲ್ಲು ಚಪ್ಪಡಿ ಹೊತ್ತು ಪ್ರತಿಭಟನೆ

Karnataka Bandh: protest in a different way

25-01-2018

ಚಾಮರಾಜನಗರ: ಮಹದಾಯಿ ಮತ್ತು ಕಳಸ ಬಂಡೂರಿ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಚಾಮರಾಜನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ತಲೆಯ ಮೇಲೆ ಕಲ್ಲು ಚಪ್ಪಡಿ ಹೊತ್ತು ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕುಡಿಯುವ ನೀರು ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜನರ ಮೇಲೆ ಕಲ್ಲು ಚಪ್ಪಡಿ ಹಾಕಿದ್ದಾರೆ ದೂರಿ ಪ್ರತಿಭಟಿಸಿದ್ದಾರೆ. ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರಗೆ ಕಲ್ಲು ಚಪ್ಪಡಿ ಹೊತ್ತು ಮೆರವಣಿಗೆ ನಡೆಸಿ, ಮಹದಾಯಿ ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಮನವಿ ಸಲ್ಲಿಸಿದರು.


ಸಂಬಂಧಿತ ಟ್ಯಾಗ್ಗಳು

Preotest mahadayi ಪ್ರಧಾನಿ ಕಲ್ಲು ಚಪ್ಪಡಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ