ಮೊಬೈಲ್ ಟವರ್ ಏರಿ ಪ್ರತಿಭಟನೆ

protest on mobile tower...!

25-01-2018

ಗದಗ: ಮಹದಾಯಿ ವಿಚಾರವಾಗಿ ಕರ್ನಾಟಕ ಬಂದ್ ಹಿನ್ನೆಲೆ, ಗದಗ್ ನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ, ಗದಗ್ ನ ಪೋಸ್ಟ್ ಆಫೀಸ್ ಬಳಿ ಇರುವ ಮೊಬೈಲ್ ಟವರ್ ಏರಿ ಪ್ರತಿಭಟಿಸಿದ ಕಾರ್ಯಕರ್ತರು, ಮಹದಾಯಿ ವಿಚಾರವಾಗಿ ಪ್ರಧಾನಿ ಮೋದಿ ಮಧ್ಯಸ್ತಿಕೆ ವಹಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಮೊಬೈಲ್ ಟವರ್ ಏರಿ ಪ್ರತಿಭಟಿಸುವ ವೇಳೆ ಪೊಲೀಸರು ಅಡ್ಡಿ ಪಡಿಸಿದ್ದು, ಹೋರಾಟಗಾರರು ಹಾಗು ಪೊಲೀಸರು ಮಧ್ಯೆ ಮಾತಿನ ಚಕಮಕಿ ಕೂಡ ನಡೆಯಿತು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರತಿಭಟನಾಕಾರರನ್ನು ಪೊಲೀಸರು ಮನವೊಲಿಸಿ ಕೆಳಗಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ