13 ಮಂದಿ ಜಲ ಸಮಾಧಿ

Mini bus sunk in water: 13 people died

27-01-2018

ಮುಂಬೈ: ಮಿನಿ ಬಸ್ ನದಿಗೆ ಉರುಳಿ13 ಜನರು ಸಾವನ್ನಪ್ಪಿರುವ ದಾರುಣ ಘಟನೆಯು, ಮಹಾರಾಷ್ಟ್ರದಲ್ಲಿ ನಡೆದಿದೆ. ಅಲ್ಲದೇ ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರದ ಪಂಚಗಾಂವ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಪಂಚಗಾಂವ ನದಿಗೆ ಮಿನಿ ಬಸ್ ಉರುಳಿಬಿದ್ದಿದೆ. ಮೃತರು ಪುಣೆ ನಗರದ ಬಾಳೇವಾಡಿಯ ಕುಟುಂಬದವರೆಂದು ತಿಳಿದುಬಂದಿದೆ. ಗಣಪತಿ ಫುಳೆ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು, ಮರಳಿ ಪುಣೆಗೆ ವಾಪಸ್ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ 13 ಜನ ಸಾವನ್ನಪ್ಪಿದ್ದಾರೆ. ಇನ್ನು ಮೃತ ಶವಗಳನ್ನು ಮೇಲೆತ್ತುವ ಕಾರ್ಯದಲ್ಲಿ ಪೊಲೀಸರಿಗೆ ಸ್ಥಳೀಯರು ನೆರವಾಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

mini Bus Bus Sunk ಕೊಲ್ಲಾಪುರ ಮಿನಿ ಬಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ