ಫೆಬ್ರವರಿ 4ಕ್ಕಾಗಿ ಬಿಜೆಪಿ ಭರ್ಜರಿ ಸಿದ್ಧತೆ

state BJP preparation for feb 4 modi programme

27-01-2018

ಬೆಂಗಳೂರು: ಫೆಬ್ರವರಿ 4ರ ಪರಿವರ್ತನಾ ಯಾತ್ರೆ ಸಮಾರೋಪ ಸಮಾವೇಶ ಹಿನ್ನೆಲೆ, ಪ್ರಧಾನಿ ಮೋದಿ ಭಾಗವಹಿಸುವ ಸಮಾವೇಶ ಯಶಸ್ವಿಗೊಳಿಸಲು ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಫೆಬ್ರವರಿ 4ದಂದೇ ಬೆಂಗಳೂರು ಬಂದ್ ಎಂಬ ಮಾತು ಕೇಳಿ ಬರುತ್ತಿರುವುದರಿಂದ ಪ್ರಧಾನಿ ಮೋದಿ ಕಾರ್ಯಕ್ರಮ ಯಶಸ್ವಿಗೊಳಿಸಲು ಬಿಜೆಪಿ ನಿರ್ಧರಿಸಿದೆ. ಈ ಕುರಿತಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ, ದಕ್ಷಿಣ ಕರ್ನಾಟಕದ 9 ಜಿಲ್ಲೆಗಳ ಬಿಜೆಪಿ ಜಿಲ್ಲಾ ಮುಖಂಡರರೊಂದಿಗೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ಆಯಾ ಜಿಲ್ಲೆಯ ಜಿಲ್ಲಾ ಅಧ್ಯಕ್ಷರು, ಶಾಸಕರು ಮತ್ತು ಜಿಲ್ಲಾ ಪದಾಧಿಕಾರಿಗಳು ಭಾಗಿಯಾಗಿದ್ದಾರೆ.

ಮೋದಿ ಭಾಗವಹಿಸುವ ಸಮಾವೇಶಕ್ಕೆ 5 ಲಕ್ಷ ಕಾರ್ಯಕರ್ತರನ್ನು ಸೇರಿಸುವ ಉದ್ದೇಶ ಹೊಂದಿರುವ ರಾಜ್ಯ ಬಿಜೆಪಿ ಘಟಕ, ಹೀಗಾಗಿ ಇಂದಿನ ಸಭೆಯಲ್ಲಿ ಪ್ರತಿ ಜಿಲ್ಲೆಯಿಂದ ಭಾಗವಹಿಸುವ ಕಾರ್ಯಕರ್ತರ ಸಂಖ್ಯೆ, ಕಾರ್ಯಕ್ರಮದ ಪೂರಕ ಸಿದ್ಧತೆಗಳ ಕುರಿತು ಸಮಾಲೋಚನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

Narendra Modi parivarthana yatra ಭರ್ಜರಿ ಕಾರ್ಯಕ್ರಮ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ