ರೇಪ್ ಅಂಡ್ ಮರ್ಡರ್...!

Rape and murder in belagavi

27-01-2018

ಬೆಳಗಾವಿ: ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿ, ನಂತರ ಕೊಲೆ ಮಾಡಿರುವ ಭೀಕರ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿಯ ಬಿಮ್ಸ್ ಕಾಲೇಜು ಆವರಣದಲ್ಲಿ ಈ ಭೀಕರ ಕೃತ್ಯ ನಡೆದಿದೆ. ಸುಮಾರು 50 ವರ್ಷದ ಮಹಿಳೆ ಮೇಲೆ ಅತ್ಯಾಚಾಗೈದು ಕೊಲೆ ಮಾಡಲಾಗಿದ್ದು, ಮಹಿಳೆಯ ಕುರಿತು ವಿವರಗಳು ಇನ್ನು ಲಭ್ಯವಾಗಿಲ್ಲ. ಬಿಮ್ಸ್ ಆವರಣದ ಇಂದಿರಾ ಕ್ಯಾಂಟಿನ್ ಕಟ್ಟಡದಲ್ಲಿ ಕಾಮುಕರು ಅತ್ಯಾಚಾರ ಎಸಗಿ, ಮಹಿಳೆ ಬಾಯಿಗೆ ಬಟ್ಟಿ ತುರುಕಿ ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಇನ್ನು ಸ್ಥಳೀಯರಿಂದ ಮಾಹಿತಿ ತಿಳಿದ ಎಪಿಎಂಸಿ ಪೊಲೀಸರು, ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rape Murder ಪರಿಶೀಲನೆ ಪ್ರಕರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ