ಬೆಂಗಳೂರು: ಕೆರೆಯಲ್ಲಿ ಶವ ಪತ್ತೆ

29-01-2018
ಬೆಂಗಳೂರು: ಬೆಂಗಳೂರಿನ ಹೆಬ್ಬಾಳದಲ್ಲಿರುವ ಲುಂಬಿನಿ ಗಾರ್ಡನ್ ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಅಲಾಮ್ (24) ಎಂದು ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ. ಈತ ಡಿ.ಜೆ.ಹಳ್ಳಿಯ ನಿವಾಸಿ ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ಶವವೊಂದು ತೇಲುತ್ತಿರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿದ ಅಮೃತಹಳ್ಳಿ ಪೊಲೀಸರು, ಕೆರೆಯಲ್ಲಿ ತೇಲುತ್ತಿದ್ದ ಶವ ಹೊರತೆಗೆದಿದ್ದಾರೆ. ಇನ್ನು ಮೃತ ವ್ಯಕ್ತಿಯ ಜೇಬಿನಲ್ಲಿ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿದೆ. ಕೆರೆಯಲ್ಲಿ ಶವ ಪತ್ತೆಯಾದ ಹಿನ್ನೆಲೆ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು, ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ವಾರಸುದಾರರ ಪತ್ತೆಗೆ ಅಮೃತಹಳ್ಳಿ ಪೊಲೀಸರು ಶೋಧ ನಡೆಸಿದ್ದಾರೆ. ಅಲ್ಲದೇ ಪ್ರಕರಣದ ತನಿಖೆಯನ್ನೂ ಮುಂದುವರೆಸಿದ್ದಾರೆ.
ಒಂದು ಕಮೆಂಟನ್ನು ಹಾಕಿ