ಕೊಲೆ ಮಾಡಿ ಪೊಲೀಸರಿಗೆ ಶರಣಾದ ವ್ಯಕ್ತಿ

Muder: accused surrendered to the police

29-01-2018

ಬೆಳಗಾವಿ: ಹಳೆ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ವ್ಯಕ್ತಿಯೊಬ್ಬರನ್ನು ಕೊಚ್ಚಿ ಕೊಲೆ ಮಾಡಿರುದ ದಾರುಣ ಘಟೆನೆಯು, ಬೆಳಗಾವಿಯಲ್ಲಿ ನಡೆದಿದೆ. ಮಂಜುನಾಥ ನಿಂಗಪ್ಪ ಚಂದರಗಿ(45) ಕೊಲೆಯಾದ ವ್ಯಕ್ತಿ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಆತನನ್ನು, ಅಡಿವೆಪ್ಪ ನಾಗಪ್ಪ ಚೂರಿ (35) ಎಂದು ಗುರುತಿಸಲಾಗಿದೆ. ಹಳೆ ವೈಷಮ್ಯದಲ್ಲಿ ಕೆರಳುತ್ತಿದ್ದ ಶಿವಲಿಂಗಪ್ಪ ಚೌಡಣ್ಣನವರ್ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಬೆಳಗಾವಿಯ ಬೈಲಹೊಂಗಲ ತಾಲ್ಲೂಕಿನ ದೊಡವಾಡದ ಬರಮ ಅಗಸಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಶಿವಲಿಂಗಪ್ಪ, ಮಂಜುನಾಥ ಹಾಗು ನಾಗಪ್ಪ ಅವರ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ, ಘಟನೆಯಲ್ಲಿ ಮಂಜುನಾಥ ನಿಂಗಪ್ಪ ಚಂದರಗಿ ಸ್ಥಳದಲ್ಲೇ ಮೃತಪಟ್ಟಿದ್ದು, ಅಡಿವೆಪ್ಪ ನಾಗಪ್ಪ ಚೂರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ದೊಡವಾಡ ಪೊಲಿಸರಿಗೆ ಆರೋಪಿ ಶರಣಾಗಿದ್ದಾನೆ. ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Murder weapons ವೈಷಮ್ಯ ಮಾರಕಾಸ್ತ್ರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ