ಎಚ್ಚರ ಮಕ್ಕಳ ಕಿಡ್ನಾಪರ್ಸ್ ಇದ್ದಾರೆ...!

5 years old child abducted in bengaluru

29-01-2018

ಬೆಂಗಳೂರು: ಮಾಗಡಿ ರಸ್ತೆಯ ಮಂಜುನಾಥ ನಗರದಲ್ಲಿ ನಿನ್ನೆ ರಾತ್ರಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಐದು ವರ್ಷದ ಮಗುವನ್ನು ಕಿಡ್ನಾಪ್ ಮಾಡಿ ಪರಾರಿಯಾಗಿದ್ದಾರೆ. ಮಂಜುನಾಥ ನಗರದ ಮನೆಯ ಮುಂಭಾಗ ರಾತ್ರಿ  9ರ ವೇಳೆ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಅಪಾಚಿ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚಂದನ್ ಎಂಬ ಬಾಲಕನನ್ನು ಅಪಹರಿಸಿಕೊಂಡು ಪರಾರಿಯಾಗಿದ್ದಾರೆ. ಚಂದನ್‍ನನ್ನು ಎತ್ತಿಕೊಂಡು ಹೋದ ತಕ್ಷಣವೇ ಓಡಿ ಬಂದ ಮಕ್ಕಳು ತಂದೆ-ತಾಯಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಚಂದನ್ ಆಟ ವಾಡುತ್ತಿದ್ದ ಸ್ಥಳದ ಸುತ್ತ ಮುತ್ತ ಹುಡುಕಾಟ ನಡೆಸಿದ ಪೋಷಕರು ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಹರಣಕಾರರಿಗಾಗಿ ಬಲೆ ಬೀಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

kidnap gang ತಂದೆ-ತಾಯಿ ಕಿಡ್ನಾಪ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ