‘ಸಂವಿಧಾನ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ’

Anna hazare says No one, cannot change constitution

30-01-2018

ಚಿತ್ರದುರ್ಗ: ಚಿತ್ರದುರ್ಗದ ಮುರಘಾ ಮಠಕ್ಕೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ದಿಢೀರ್ ಭೇಟಿ ನೀಡಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಸಂವಿಧಾನ ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ, ನಮ್ಮ ಸಂವಿಧಾನ ಅತ್ಯುತ್ತಮ ಸಂವಿಧಾನ, ಎಲ್ಲರಿಗೂ ಬದುಕುವ ಹಕ್ಕು ಕೊಟ್ಟಿದೆ ಎಂದರು.

ದೇಶದಲ್ಲಿ ರೈತರ ಆತ್ಮಹತ್ಯಾ ಸರಣಿಗಳು ನಡೆಯುತ್ತಿವೆ. ರೈತರ ಆತ್ಮಹತ್ಯೆ ತಡೆಯಲು ಆಳುವ ಸರ್ಕಾರಗಳು ವಿಫಲವಾಗಿವೆ ಎಂದು ದೂರಿದರು. ಅಲ್ಲದೇ ರೈತರ ಪರವಾಗಿ ಮಾರ್ಚ್ 23ರಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದೇನೆ ಎಂದು ತಿಳಿಸಿದರು. ರೈತರ ಸಮಸ್ಯೆಗಳು ಮುನ್ನಲೆಗೆ ಬರಬೇಕು, ವರ್ಷಕ್ಕೆ ಹನ್ನೆರಡು ಲಕ್ಷ ರೈತರು ಆತ್ಮಹತ್ಯೆ ಮಾಡುಕೊಳ್ಳುತ್ತಿದ್ದಾರೆ, ರೈತರಿಗೆ 60ವರ್ಷದ ನಂತರ ಪ್ರತಿಯೊಬ್ಬರಿಗೆ ಪಿಂಚಣಿ ಸಿಗಬೇಕು, ಈ ಬೇಡಿಕೆಗಳನ್ನು ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇನೆ ಎಂದರು.


ಸಂಬಂಧಿತ ಟ್ಯಾಗ್ಗಳು

anna Hazare farmers ಸಂವಿಧಾನ ಬದುಕುವ ಹಕ್ಕು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ