ಕಾಂಗ್ರೆಸ್ ನ ಮಹತ್ವದ ಸಭೆ ಇಂದು

Congress important meeting in palace grounds

30-01-2018

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ, ಕಾಂಗ್ರೆಸ್ ನಾಯಕರಿಂದ‌ ಇಂದು ಮಹತ್ವದ ಸಭೆ ಏರ್ಪಡಿಸಲಾಗಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅಲ್ಲದೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರುಗಳು, ಹಿರಿಯ ಸದಸ್ಯರೂ ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಧಾನಸಭಾ ಚುನಾವಣೆಯ ರಣತಂತ್ರ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ರಾಜ್ಯ ಪ್ರವಾಸ, ಬಿಜೆಪಿ-ಜೆಡಿಎಸ್ ತಂತ್ರಕ್ಕೆ ಪ್ರತಿತಂತ್ರ, ಮತದಾರರ ಮನವೊಲಿಕೆಗೆ ಮಾಡಿಕೊಳ್ಳಬೇಕಾದ ಕಾರ್ಯ, ಸರ್ಕಾರದ ಅಭಿವೃದ್ಧಿ ಕಾರ್ಯಗಳ ಪ್ರಚಾರ, ಪಕ್ಷ ಸಂಘಟನೆ ಕುರಿತಂತೆ ವಿವಿಧ ಪ್ರಮುಖ ವಿಚಾರಗಳ ಬಗ್ಗೆ ಸದಸ್ಯರುಗಳ ಜೊತೆಗೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಹಾಗು ವೇಣುಗೋಪಾಲ್‌ ಚರ್ಚೆ ನಡೆಸಲಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ