ಅವಸರದಲ್ಲಿ ಪ್ರಾಣ ಕಳೆದುಕೊಂಡ ಅಬಕಾರಿ ಅಧೀಕ್ಷಕ

30-01-2018
ಬೆಂಗಳೂರು: ಮನೆಗೆ ಹೋಗುವ ಅತುರದಲ್ಲಿ ಬಿಎಂಟಿಸಿ ಬಸ್ ಹತ್ತಲು ಹೋದ ಅಬಕಾರಿ ಇಲಾಖೆಯ ಅಧೀಕ್ಷಕ ರವೀಂದ್ರ ಅವರು ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಮಾದನಾಯ್ಕನಹಳ್ಳಿಯ ಮಾಕಳಿ ಬಸ್ ನಿಲ್ದಾಣದ ಬಳಿ ನಿನ್ನೆ ರಾತ್ರಿ ನಡೆದಿದೆ.
ಮಾಕಳಿ ಅಬಕಾರಿ ಕಚೇರಿಯಲ್ಲಿ ಅಧೀಕ್ಷಕರಾಗಿ ಕಾರ್ಯನಿರ್ವಸುತ್ತಿದ್ದ ರವೀಂದ್ರ (45) ಅವರು ರಾತ್ರಿ 7.45ರ ವೇಳೆ ಕೆಲಸ ಮುಗಿಸಿಕೊಂಡು ಯಲಹಂಕದ ಮನೆಗೆ ಹೋಗಲು ಮತ್ತಹಳ್ಳಿಯಿಂದ ಯಶವಂತಪುರ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ಗೆ ಹತ್ತುತ್ತಿದ್ದಾಗ ಆಯ ತಪ್ಪಿ ಕಳೆಗೆ ಬಿದ್ದಿದ್ದಾರೆ. ಬಸ್ ಚಕ್ರ ಹರಿದು ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಬಸ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಒಂದು ಕಮೆಂಟನ್ನು ಹಾಕಿ