ಎಚ್ಚರ ನಗರದಲ್ಲಿ ಕಾರುಗಳ್ಳರಿದ್ದಾರೆ..!

be alert: car thieves are There in city!

31-01-2018

ಬೆಂಗಳೂರು: ನಗರದ ಬಗಲಗುಂಟೆಯ ರಾಮಯ್ಯ ಲೇಔಟ್‍ನಲ್ಲಿ ಮನೆಯ ಮುಂಭಾಗ ನಿಲ್ಲಿಸಿದ್ದ ಸ್ಕಾರ್ಪಿಯೋ ಕಾರನ್ನು ನಕಲಿ ಕೀ ಬಳಸಿ ದುಷ್ಕರ್ಮಿಗಳು ಕಳವು ಮಾಡಿ ಪರಾರಿಯಾಗಿರುವ ನಿನ್ನೆ ರಾತ್ರಿ ಘಟನೆ ನಡೆದಿದೆ. ಬಗಲಗುಂಟೆಯ ರಾಮಯ್ಯ ಲೇಔಟ್‍ನಲ್ಲಿ ಮನೆಯ ಮುಂದೆ ರಾತ್ರಿ ನಿಲ್ಲಿಸಿದ್ದ ಸ್ಕಾರ್ಪಿಯೋ ಕಾರನ್ನು ಮಧ್ಯರಾತ್ರಿ ಕಾರೊಂದರಲ್ಲಿ ಬಂದ ದುಷ್ಕರ್ಮಿಗಳು ಕಾರಿನ ಕಿಟಕಿ ಒಡೆದು ಒಳ ಹೋಗಿ ನಕಲಿ ಕೀ ಬಳಸಿ ಸ್ಟಾರ್ಟ್ ಮಾಡಿಕೊಂಡು ಪರಾರಿಯಾಗಿದ್ದಾರೆ. ಕಾರು ಕಳವಿನ ದೃಶ್ಯಗಳು ಮನೆಯ ಮುಂಭಾಗ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಅದನ್ನು ಪರಿಶೀಲಿಸಿರುವ ಬಗಲಗುಂಟೆ ಪೊಲೀಸರು ಪ್ರಕರಣ ದಾಖಲಿಸಿ, ಕಾರು ಕಳ್ಳರಿಗಾಗಿ ಬೆಲೆ ಬೀಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Duplicate car thief ನಕಲಿ ಕೀ ಸ್ಕಾರ್ಪಿಯೋ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ