'ಕುರಿಗಾರರಿಗೆ ತರಬೇತಿ ಕಾರ್ಯಾಗಾರ ಉದ್ಘಾಟನೆ’31-01-2018

ಬೆಂಗಳೂರು: ಆಕಸ್ಮಿಕವಾಗಿ ಮರಣಹೊಂದಿದ 75,410 ಕುರಿ-ಮೇಕೆಗಳಿಗೆ ಕಳೆದ ಐದು ವರ್ಷಗಳಲ್ಲಿ 41.57 ಕೋಟಿ ರೂ. ಪರಿಹಾರ ಧನ ವಿತರಿಸಲಾಗಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಎ.ಮಂಜು ಇಂದಿಲ್ಲಿ ತಿಳಿಸಿದರು.

ಕುರಿಗಾರರ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಸರ್ಕಾರ ಒಟ್ಟು 60,234 ಫಲಾನುಭವಿಗಳಿಗೆ ಪರಿಹಾರ ನೀಡಿದೆ. ಹಿಂದೆ ಕುರಿ-ಮೇಕೆ ಸಾಕಾಣಿಕೆ ಉಪಕಸುಬಾಗಿತ್ತು. ಆದರೆ ಇಂದು ಅದೇ ಕಸುಬು ಮುಖ್ಯ ಉದ್ಯೋಗವಾಗಿ ಬೆಳೆದಿದೆ ಎಂದರು. ಕುರಿ ಮತ್ತು ಉಣ್ಣೆ ಉತ್ಪಾದನೆಗೆ ಸರ್ಕಾರ ಒತ್ತು ನೀಡಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇಲ್ಲಿಯವರೆಗೆ 237 ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿಗೆ ಒಂದಾವರ್ತಿ ಪ್ರೋತ್ಸಾಹಧನವಾಗಿ ಪ್ರತಿ ಸಂಘಕ್ಕೆ 5 ಲಕ್ಷ ರೂ.ಗಳಂತೆ 11.85 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

ವಿಶೇಷ ಘಟಕ ಯೋಜನೆಯಡಿ 2054 ಘಟಕಗಳಿಗೆ 7.47 ಕೋಟಿ ರೂ.ಗಳನ್ನು ಕಳೆದ ಐದು ವರ್ಷಗಳಲ್ಲಿ ನೀಡಲಾಗಿದೆ ಹಾಗೂ ಗಿರಿಜನ ಉಪಯೋಜನೆಯಡಿ 625 ಘಟಕಗಳಿಗೆ 241 ಕೋಟಿ ರೂ.ಗಳನ್ನು ನೀಡಲಾಗಿದೆ. ಕಳೆದ ಐದು ವರ್ಷಗಳಲ್ಲಿ 28400 ಕುರಿಗಾರರಿಗೆ 53 ಲಕ್ಷ ರೂ.ಗಳ ವೆಚ್ಚದಲ್ಲಿ ತರಬೇತಿ ನೀಡಲಾಗಿದೆ. ಪ್ರತಿ ವರ್ಷ ಕುರಿ ಮೇಕೆಗಳಿಗೆ ಪಲ್ಸ್ ಪೋಲಿಯೋ ಮಾದರಿಯಲ್ಲಿ ಲಸಿಕೆ ನೀಡುವ ಬಗ್ಗೆ ಕ್ರಮಕೈಗೊಳ್ಳಲಾಗುವದು.  ಸಾರ್ವಜನಿಕರು ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ಪಡೆದುಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸುವಂತೆ ತಿಳಿಸಿದರು.

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ. ಕೃಷ್ಣಪ್ಪ ಮಾತನಾಡಿ, ರಾಜ್ಯದಲ್ಲಿ ಸುಮಾರು 550 ಸೊಸೈಟಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರವು ಈ ಉತ್ಪಾದಕ ಸಂಘಗಳಿಗೆ ಒಳ್ಳೆಯ ಪ್ರೋತ್ಸಾಹಕ ಹಾಗೂ ವಿಶೇಷ ಯೋಜನೆಗಳನ್ನು ಜಾರಿ ಮಾಡುತ್ತಿದೆ ಎಂದರು.


ಸಂಬಂಧಿತ ಟ್ಯಾಗ್ಗಳು

A. manju Wool ಉದ್ಯೋಗ ಪೋಲಿಯೋ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ