‘ಶಿವಮೂರ್ತಿ ಶಿವಾಚಾರ್ಯರಿಗೆ ಭಾರತ ರತ್ನ ನೀಡಲಿ’01-02-2018

ದಾವಣಗೆರೆ: ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿ ಎಂದು, ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ತರಳಬಾಳು ಹುಣ್ಣಿಮೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹೇಳಿಕೆ ನೀಡಿದ್ದಾರೆ. ಶ್ರೀಗಳು ಜಲ ಕ್ರಾಂತಿ ಸೇರಿದಂತೆ ಸಾಕಷ್ಟು ಸಮಾಜಮುಖಿ ಕೆಲಸ ಮಾಡಿದ್ದಾರೆ, ಶ್ರೀಗಳು ಭಾರತ ರತ್ನಕ್ಕೆ ಅರ್ಹರು ಎಂದು ಹೇಳಿದ್ದಾರೆ. ನಮ್ಮ‌ ಸಮಾಜದ ಅಭ್ಯರ್ಥಿಗಳನ್ನ ಗೆಲ್ಲಿಸಿ ಕೈಹಿಡಿಯುವಂತೆ ತರಳಬಾಳು ಶಿವಮೂರ್ತಿ ಶಿವಾಚಾರ್ಯ ಶ್ರೀಗಳಿಗೆ ಮನವಿ ಮಾಡುವೆ ಎಂದ ಅವರು, ಸಿದ್ದರಾಮಯ್ಯ ಮತ್ತೆ ಮುಖ್ಯ ಮಂತ್ರಿಯಾಗಲು ಶ್ರೀಗಳ ಆಶೀರ್ವಾದ ಇರಲಿ ಎಂದಿದ್ದಾರೆ.

ಇನ್ನು ಇತ್ತೀಚಿಗೆ ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀಗಳು ಲಿಂಗಾಯತ ಸ್ವತಂತ್ರ ಧರ್ಮ ಎಂಬ ಹೇಳಿಕೆಗೆ ಟಾಂಗ್ ನೀಡದ ಶಿವಶಂಕರಪ್ಪ, ವೀರಶೈವ ಲಿಂಗಾಯತ, ಲಿಂಗಾಯತ ಅಂತ ಒಡಕು ಶುರುವಾಗಿದೆ, ನಾವು ಹೆಚ್ಚು, ನಾವು ಹೆಚ್ಚು ಅಂತ ಹೇಳುತ್ತಿದ್ದಾರೆ. ಅವರವರ ಧರ್ಮ ಅವರು ಅನುಸರಿಸಲಿ, ಇಬ್ಬರನ್ನೂ ದೇವರು ಕಾಪಾಡಲಿ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ