ಷಾ ಲೆಕ್ಕಕ್ಕೆ ಕಾಂಗ್ರೆಸ್ ತಿರುಗೇಟು..!01-02-2018

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ಅನುದಾನಗಳ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ್ಯಅಮಿತ್ ಷಾ ಲೆಕ್ಕ ಕೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಅಂಕಿ-ಸಂಖ್ಯೆ ಸಮೇತ ಮಾಹಿತಿ ನೀಡಲು ಕಾಂಗ್ರೆಸ್ ಮುಂದಾಗಿದೆ.  ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ಆಡಳಿತಾವಧಿಯಲ್ಲಿ ರಾಜ್ಯಕ್ಕೆ ಬಂದ ಅನುದಾನ ಬಗ್ಗೆ, ಫೆಬ್ರುವರಿ 4ರ ಮೋದಿ ಕಾರ್ಯಕ್ರಮಕ್ಕೂ ಮುಂಚೆ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಅಮಿತ್ ಷಾ ಲೆಕ್ಕಕ್ಕೆ ತಿರುಗೇಟು ನೀಡಲು ಮುಂದಾಗಿದೆ.

ಫೆಬ್ರುವರಿ 3ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಟಿ ನಡೆಸಲಿದ್ದು, ಮನಮೋಹನ್ ಸಿಂಗ್ ಮತ್ತು ಮೋದಿ ಅವಧಿಯಲ್ಲಿ ರಾಜ್ಯಕ್ಕೆ ಬಂದ ಅನುದಾನ ಕುರಿತಾದ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಅಮಿತ್ ಷಾ ಕೇಳಿದ ಲೆಕ್ಕಕ್ಕೆ ಸಮರ್ಥವಾಗಿ ಉತ್ತರ ನೀಡಲಿದ್ದೇವೆ ಎಂದು, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅಮಿತ್ ಷಾ ಕೇಂದ್ರ ನೀಡಿದ ಹಣದ ಲೆಕ್ಕ ಕೇಳಿದ್ದಾರೆ, ಅವರು ಅಷ್ಟು ಕೊಟ್ಟಿದ್ದೇವೆ, ಇಷ್ಟು ಕೊಟ್ಟಿದ್ದೇವೆ ಅಂತ ಹೇಳುತ್ತಿದ್ದಾರೆ, ಯಾರ್ಯಾರು ಎಷ್ಟು ಕೊಟ್ಟಿದ್ದಾರೆ ಎಂದು, ಫೆಬ್ರವರಿ 3ರಂದು ಸುದ್ದಿಗೋಷ್ಟಿ ನಡೆಸಿ ಲೆಕ್ಕ ನೀಡೋದಾಗಿ ಗುಂಡೂರಾವ್ ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Amit Shah Dinesh Gundu Rao ಕೆಪಿಸಿಸಿ ಸಮರ್ಥ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ