ಬೀದರ್ ನಲ್ಲಿ ಸಿಬಿಐ ತಂಡ

Anurag Tiwari case investigation started by CBI officers in bidar

02-02-2018

ಬೀದರ್: ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿಯಿಂದ ಸಿಬಿಐ ತಂಡ ಬೀದರ್ಗೆ ಆಗಮಿಸಿದೆ. ಕಳೆದ ಆರೇಳು ತಿಂಗಳುಗಳಿಂದ ಉತ್ತರಪ್ರದೇಶ ಸೇರಿದಂತೆ ವಿವಿಧೆಡೆ ಸದ್ದಿಲ್ಲದೆ ತನಿಖೆ ನಡೆಸುತ್ತಿದ್ದು, ಇದೀಗ ಬೀದರ್ಗೆ ಸಿಬಿಐ ತಂಡ ಆಗಮಿಸಿದೆ.

ಇನ್ನು ಅವರೊಂದಿಗೆ ನವದೆಹಲಿಯ ಇಬ್ಬರು ಇನ್ಸ್ ಪೆಕ್ಟರ್ಗಳು ಬೀದರ್ ನಗರಕ್ಕಾಗಮಿಸಿದ್ದು, ಇಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಅನುರಾಗ ತಿವಾರಿಯವರ ನಿಕಟ ಸಂಪರ್ಕದಲ್ಲಿದ್ದ ಅಧಿಕಾರಿಗಳು, ಆಪ್ತರು, ಅವರು ವಾಸವಿದ್ದ ಮನೆ, ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಎಲ್ಲಾಕಡೆಯಿಂದ ಮಾಹಿತಿ ಕಲೆಹಾಕುತ್ತಿದ್ದಾರೆ.

2007ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ ತಿವಾರಿ ಉತ್ತರ ಪ್ರದೇಶದಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎನ್ನಲಾಗಿದ್ದು, ಅವರ ಸಾವಿನ ಹಿಂದೆ ಸಾಕಷ್ಟು ಅನುಮಾನ ಹುಟ್ಟಿಕೊಂಡಿದ್ದು ಕುಟುಂಬಸ್ಥರು ಸಿಬಿಐ ತನಿಖೆಗೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ  ತನಿಖೆ ಆರಂಭಿಸಿರುವ ಸಿಬಿಐ ಅಧಿಕಾರಿಗಳು ಬೀದರ್ನಲ್ಲಿ ಬೀಡುಬಿಟ್ಟಿದ್ದಾರೆ. ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

Anuraga Tewari CBI IAS District Collector


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ