ಬಸ್ ನಲ್ಲಿ ಕುಡುಕನ ಅವಾಂತರ

Drunk man threatened in bus

02-02-2018

ತುಮಕೂರು: ಕುಡಿದ ಮತ್ತಿನಲ್ಲಿ ಪ್ರಯಾಣಿಕನೊಬ್ಬ ಬಸ್ ನಲ್ಲಿ ಅವಾಂತರ ಸೃಷ್ಟಿಸಿದ್ದಾನೆ. ಬಸ್ ನಲ್ಲಿ ಬಾಂಬ್ ಇದೆ ಎಂದು ಪ್ರಯಣಿರಲ್ಲಿ ಆತಂಕ ಸೃಷ್ಟಿಸಿದ್ದಾನೆ. ಬೆಂಗಳೂರಿನಿಂದ ಬಿಜಾಪುರಕ್ಕೆ ಹೋಗುತ್ತಿದ್ದ ಬಸ್ ನಲ್ಲಿ ಬಾಂಬ್ ಇದೆ ಎಂದು ಸಹ ಪ್ರಯಾಣಿಕರನ್ನು ಹೆದರಿಸಿದ್ದಾನೆ. ಇದರಿಂದ ಬಸ್ ಚಾಲಕ ತಪಾಸಣೆ ನಡೆಸುವಂತೆ, ತುಮಕೂರಿನ ಎನ್.ಇ.ಪಿ.ಎಸ್ ಪೊಲೀಸ್ ಠಾಣೆಗೆ ಬಸ್ ಕರೆತಂದಿದ್ದು, ಪೊಲೀಸರು ಬಸ್ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ನಂತರ ಬಸ್ ನಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದಿದ್ದು ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ನಂತರದಲ್ಲಿ ಕುಡುಕನನ್ನು ನಿರ್ವಾಹಕರು ಮತ್ತು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡು, ಪ್ರಯಾಣ ಮುಂದುವೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bomb NEPS ಪ್ರಯಾಣಿಕ ತಪಾಸಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ