ಅಕ್ರಮ ಗ್ರಾನೈಟ್: ಲಾರಿ ಬಿಟ್ಟು ಚಾಲಕ ಪರಾರಿ

Illegal granite lorries seized by forest officers

02-02-2018

ಮಂಡ್ಯ: ಅಕ್ರಮವಾಗಿ ಗ್ರಾನೈಟ್ ಕಲ್ಲು ಸಾಗಾಣೆ ಮಾಡುತ್ತಿದ್ದ 2 ಲಾರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಡ್ಯದ ಮದ್ದೂರು ತಾಲ್ಲೂಕಿನ ನಾಥೇಶ್ವರ ದೇವಾಲಯದ  ಕೆಮ್ಮಣ್ಣು ನಾಲೆ ಬಳಿ, ಅರಣ್ಯ ಇಲಾಖೆ ಪೊಲೀಸರು ಲಾರಿಗಳನ್ನು ತಪಾಸಣೆ ಮಾಡುವಾಗ ಅಕ್ರಮ ಗಣಿಗಾರಿಕೆಯಿಂದ ಗ್ರಾನೈಟ್ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಮದ್ದೂರು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಕೈಗೊಂಡು, ಗ್ರಾನೈಟ್ ಸಾಗಿಸುತ್ತಿದ್ದ ಲಾರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇನ್ನು ಅರಣ್ಯಾಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಲಾರಿ ಬಿಟ್ಟು ಚಾಲಕರು ಪರಾರಿಯಾಗಿದ್ದಾರೆ. ಅಕ್ರಮ ಕಲ್ಲುಗಣಿಗಾರಿಕೆ ನಡೆಸಿ ಸಾಗಿಸುತ್ತಿದ್ದ ಗ್ರಾನೈಟ್ ವಶಪಡಿಸಿಕೊಂಡಿರುವ ಬಗ್ಗೆ ಅರಣ್ಯಾಧಿಕಾರಿಗಳಿಂದ ಗಣಿ ಅಧಿಕಾರಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಕ್ರಮದ ಬಗ್ಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಬರಲು ಗಣಿ ಮತ್ತು‌ ಪೊಲೀಸ್ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಅರಣ್ಯಾಧಿಕಾರಿಗಳು ದೂರಿದ್ದಾರೆ. ಕೋಟ್ಯಾಂತರ ರೂ. ಮೌಲ್ಯದ ಬೆಲೆ ಬಾಳುವ ಗ್ರಾನೈಟ್ ಕಲ್ಲು ತುಂಬಿರುವ ಲಾರಿಗಳು ಅರಣ್ಯಾಧಿಕಾರಿಗಳ ವಶದಲ್ಲಿವೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Mining Granite ಅರಣ್ಯಾಧಿಕಾರಿ ಕಾರ್ಯಾಚರಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ