ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ..ಬೈಕ್ ಸವಾರರು ಸ್ಥಳದಲ್ಲೇ ಸಾವು

Kannada News

26-04-2017

ಮೈಸೂರು: ದ್ವಿಚಕ್ರ ವಾಹನಗಳ ನಡುವೆ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮಂಟಿ ಗ್ರಾಮದ ನಿವಾಸಿ ಬಾಬು(44), ಮಂಚೇಗೌಡನ ಕೊಪ್ಪಲು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಬಾಬು ಎಂಬವರು ಕಳೆದ ರಾತ್ರಿ ಗಾರೆ ಕೆಲಸ ಮುಗಿಸಿಕೊಂಡು ತೆರಳುತ್ತಿರುವಾಗ 
ಎದುರಿನಿಂದ ಬಂದ ಗಿರೀಶ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಜೋರಾಗಿ ಮಳೆ ಸುರಿಯುತ್ತಿದ್ದುದರಿಂದ ಎದುರಿನಿಂದ ಬಂದ ವಾಹನಗಳು ಕಾಣಿಸದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿದ್ದು ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Links :



ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ