ಪುಂಡರ ವಿರುದ್ಧ ಕ್ರಮಕ್ಕೆ ವಿದ್ಯಾರ್ಥಿನಿಯರ ಒತ್ತಾಯ

student protest in front of taluk office chamarajanagar

03-02-2018

ಚಾಮರಾಜನಗರ: ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನೊಬ್ಬನನ್ನು ಹಿಡಿದು ಧರ್ಮದೇಟು ನೀಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಗುಂಡ್ಲುಪೇಟೆಯ ನಗರದ ಜೆ.ಎಸ್.ಎಸ್ ಕಾಲೇಜು ಮುಂದೆ ನಿಂತು, ಕಾಲೇಜು ವಿದ್ಯಾರ್ಥಿನಿಯರಿಗೆ ಅಶ್ಲೀಲ ಸನ್ನೆಗಳು ಮತ್ತು ಮನಬಂದಂತೆ ವರ್ತಿಸುತ್ತಿದ್ದ ಯುವನನ್ನು ಹಿಡುದು ಕಾಲೇಜು ವಿದ್ಯಾರ್ಥಿನಿಯರು ಮತ್ತು ಸ್ಥಳೀಯರು ಥಳಿಸಿದ್ದಾರೆ. ಇನ್ನು ಈ ಕುರಿತು ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನಿಂದ ತಾಲ್ಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಗುಂಡ್ಲುಪೇಟೆ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ತಾಲ್ಲೂಕು ಕಚೇರಿ ಮುಂದೆ ಸೇರಿದ ನೂರಾರು ವಿದ್ಯಾರ್ಥಿಗಳು ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

students gundlupete ಪುಂಡರು ಧರ್ಮದೇಟು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ