ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ..!

indira gandhi canteen photo and tense in surathkal

03-02-2018

ಮಂಗಳೂರು: ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಕಿಡಿಗೇಡಿಗಳು, ಮಸಿ ಬಳಿದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಸುರತ್ಕಲ್ ನಲ್ಲಿ ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ನಿನ್ನೆ ತಡರಾತ್ರಿ ಕೃತ್ಯ ನಡೆದಿರಬುದೆಂದು ಶಂಕಿಸಲಾಗಿದೆ. ಕ್ಯಾಂಟೀನ್ ಕಟ್ಟಡದ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಇನ್ನು ಈ ಕುರಿತಂತೆ ಸ್ಥಳೀಯ ಕಾಂಗ್ರೆಸ್, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.


ಸಂಬಂಧಿತ ಟ್ಯಾಗ್ಗಳು

Indira Canteen Surathkal ನಿರ್ಮಾಣ ಕ್ಯಾಂಟೀನ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ