‘ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ’03-02-2018

ಮೈಸೂರು: ನಾನೂ ನಿಷ್ಠಾವಂತ ಬಿಜೆಪಿ ಕಾರ್ಯಕರ್ತ, ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ ಎಂದು, ಮಾಜಿ ಸಚಿವ ಎಸ್.ಎ.ರಾಮದಾಸ್ ಹೇಳಿದ್ದಾರೆ. ಮೈಸೂರಿನಲ್ಲಿಂದು ಮಾತನಾಡಿದ ಅವರು, ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ರಾಮದಾಸ್ ಜೆಡಿಎಸ್‌ಗೆ ಹೋಗುತ್ತಿದ್ದಾರೆಂಬುದು ವಂದತಿ. ಕೆಲ ಮಾಧ್ಯಮಗಳು ಜೆಡಿಎಸ್‌ಗೆ ಹೋಗುವುದಾಗಿ ಸುದ್ದಿ ಪ್ರಕಟಿಸಿವೆ, ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸಿದರೆ ನೋಟಿಸ್ ನೀಡುವುದಾಗಿ ಎಚ್ಚರಿಸಿದ್ದಾರೆ. ತಮ್ಮ ವಿರುದ್ಧ ಹಬ್ಬಿರುವ ವಂದತಿಗಳ ವಿರುದ್ಧ ರಾಮದಾಸ್ ಅಸಮಾಧಾನ ವ್ಯಕ್ತಪಡಿಸಿದರು.  ನಾನು 25 ವರ್ಷಗಳಿಂದ ಬಿಜೆಪಿಯಲ್ಲಿದ್ದೇ‌ನೆ, ಬಿಜೆಪಿ ನನಗೆ ಎಲ್ಲವನ್ನೂ ನೀಡಿದೆ. ನಾನೇಕೆ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಲಿ, ಕೆಲ ಮಾಧ್ಯಮಗಳಲ್ಲಿ ಬಂದಿರೋ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

s.a Ramdas Ex-minister ವಂದತಿ ಎಚ್ಚರಿಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ