ಗೂಳಿಹಟ್ಟಿ ಶೇಖರ್ ಬಿಜೆಪಿಗೆ..?

goolihatti Shekar joins to BJP..?

03-02-2018

ಬೆಂಗಳೂರು: ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇಂದು ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಗೂಳಿಹಟ್ಟಿ ಶೇಖರ್, ಚಿತ್ರದುರ್ಗದ ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಮಾಜಿ ಶಾಸಕ. ಈ ಹಿಂದೆ ಬಿಜೆಪಿ ಆಡಳಿತಾವಧಿಯಲ್ಲಿ ಅವರು ಪಕ್ಷೇತರ ಶಾಸಕರಾಗಿದ್ದರು. ಅಲ್ಲದೇ ಬಿಜೆಪಿಗೆ ಬೆಂಬಲ ನೀಡಿದ್ದರು. ಬಿಜೆಪಿ ಆಡಳಿತಾವಧಿಯಲ್ಲಿ ಸಚಿವ ಸ್ಥಾನ ನಿರ್ವಹಿಸಿರುವ ಗೂಳಿಹಟ್ಟಿ, ಸಚಿವ ಸ್ಥಾನ ಕಳೆದುಕೊಂಡಿದ್ದರಿಂದ ಬಿಜೆಪಿಗೆ ನೀಡಿದ್ದ ಬೆಂಬಲ ಹಿಂಪಡೆದಿದ್ದರು. ಇನ್ನು ಇದೀಗ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

goolihatti Shekar Hosadurga ಪಕ್ಷೇತರ ಮಾಜಿ ಸಚಿವ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ