‘ಕಾಂಗ್ರೆಸ್ ನವರಿಗೆ ಭಯ ಶುರುವಾಗಿದೆ’05-02-2018

ಬೆಂಗಳೂರು: ಪ್ರಧಾನಿ ಮೋದಿ ಅವರು ಕರ್ನಾಟಕ ಪ್ರವೇಶ ಮಾಡಿದ್ದಕ್ಕೆ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ಹೀಗಾಗಿ ಕಾಂಗ್ರೆಸ್ ನವರಿಗೆ ಇದು ತಮ್ಮ ಕೊನೆಗಾಲ ಎಂಬ ಭಯ ಶುರುವಾಗಿದೆ‌ ಎಂದು, ಕೇಂದ್ರ ಸಚಿವ ಸದಾನಂದಗೌಡರು ಹೇಳಿದ್ದಾರೆ. ನಗರದಲ್ಲಿಂದು ಸದಾನಂದಗೌಡ, ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮೋದಿಯವರ ಹೇಳಿಕೆಗಳಿಗೆ ಬಹಳ ವೇಗವಾಗಿ ಪ್ರತಿಕ್ರಿಯೆ ನೀಡಿದ್ದಾರೆ, ಇಷ್ಟೇ ವೇಗದಲ್ಲಿ ಕೇಂದ್ರದ ಯೋಜನೆಗಳನ್ನು ಅನುಷ್ಠಾನ ಮಾಡಿದ್ದರೆ ಪ್ರಧಾನಿ ರಾಜ್ಯದ ಸಿಎಂಗೆ ಲೆಕ್ಕ ಕೇಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.

ಇನ್ನು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತುಂಬಾ ಆತಂಕಕ್ಕೊಳಗಾಗಿದ್ದಾರೆ. ಕಾಂಗ್ರೆಸ್ ನವರು ಎಷ್ಟು ಸ್ವಾರ್ಥಿಗಳಿದ್ದಾರೆ ಎಂದರೆ, ಪ್ರಧಾನಿಯವರ ಸ್ವಾಗತ ಮಾಡಲು ಯಾವೊಬ್ಬ ಮಂತ್ರಿಯೂ ಬರಲಿಲ್ಲ, ಇದು ರಾಜ್ಯದ ಜನರಿಗೆ ಮಾಡಿದ ಅಪಮಾನ ಎಂದರು. ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಅಪರಾಧ ಜಾಸ್ತಿ ಇದೆ ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಾರೆ, ಅಪಹರಣ ಹಾಗೂ ಕೊಲೆ ಪ್ರಕರಣಗಳಲ್ಲಿ ದೆಹಲಿ ಬಿಟ್ಟರೆ ನಂತರದಲ್ಲಿ ಬೆಂಗಳೂರು ಇದೆ, ಪರಮೇಶ್ವರ್ ದಾಖಲೆ ಸಮೇತ ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ