ಸಾಲಗಾರರಿಗೆ ಹೆದರಿ ಪ್ರಾಣ ಬಿಟ್ಟ ರೈತ..!

bank loan: A farmer died in kalaburagi

05-02-2018

ಕಲಬುರಗಿ: ಸಾಲಕ್ಕೆ ಹೆದರಿ ಮಾನಸಿಕ ಖಿನ್ನತೆಗೊಳಗಾಗಿದ್ದ ರೈತರೊಬ್ಬರು ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೌನೇಶ್ ರಾಠೋಡ (31) ಮೃತ ರೈತ. ಜಿಲ್ಲೆಯ ಕಲಬುರಗಿ ತಾಲ್ಲೂಕಿನ ಖಣದಾಳ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಮೃತ ಮೌನೇಶನಿಗೆ ಖಣದಾಳ ಗ್ರಾಮದಲ್ಲಿ ಮೂರುವರೆ ಎಕರೆ ಜಮೀನಿತ್ತು. ಬೆಳೆಗೆಂದು ಬ್ಯಾಂಕ್ ಸೇರಿ 20 ಲಕ್ಷಕ್ಕೂ ಅಧಿಕ ಸಾಲಮಾಡಿಕೊಂಡಿದ್ದ. ಸಾಲಗಾರರ ಕಾಟದಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದು, ಎರಡು ದಿನಗಳ ಹಿಂದೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನು ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಎಸ್.ಪಿ. ಕಚೇರಿಗೆ ಮೃತದೇಹದೊಂದಿಗೆ ಆಗಮಿಸಿದ ಪೋಷಕರಿಂದ ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಫರತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Farmer Bank loan ಜಿಲ್ಲಾಸ್ಪತ್ರೆ ಮೃತದೇಹ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ