ಕಾಂಗ್ರೆಸ್ ಸೇರಿದ ವಿಜಯ ಶಂಕರ್-ಅನಿಲ್ ಚಿಕ್ಕಮಾದು

anil chikkamadu and c.h vijay shankar joined congress

05-02-2018

ಬೆಂಗಳೂರು: ಬಿಜೆಪಿ ಪಕ್ಷದ ಮಾಜಿ ಸಚಿವ ಸಿ.ಎಚ್.ವಿಜಯ್ ಶಂಕರ್ ಮತ್ತು ಜೆಡಿಎಸ್ ನ ಅನಿಲ್ ಚಿಕ್ಕಮಾದು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗೆ ಅಧೀಕೃತವಾಗಿ ಸೇರ್ಪಡೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು, ಪಕ್ಷದ ಧ್ವಜ ಕೊಟ್ಟು, ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ಕೆಳೆದ ಕೆಲ ದಿನಗಳಿಂದ ಬಿಜೆಪಿಯೊಂದಿಗೆ ಅಂತರ ಕಾಯ್ದುಕೊಂಡಿದ್ದ ಸಿ.ಎಚ್.ವಿಜಯ್ ಶಂಕರ್ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಇನ್ನು ಜೆಡಿಎಸ್ ಮುಖಂಡ ಹಾಗು ಎಚ್.ಡಿ.ಕೋಟೆ ಕ್ಷೇತ್ರದ ಶಾಸಕರಾಗಿದ್ದ ಚಿಕ್ಕಮಾದು ಅವರ ನಿಧನ ನಂತರ ಜೆಡಿಎಸ್ ನಲ್ಲಿ ತಮ್ಮನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ದೂರಿದ್ದ ಅನಿಲ್ ಚಿಕ್ಕಮಾದು ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಎಚ್.ಸಿ.ಮಹಾದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವೆ ಉಮಾಶ್ರಿ, ಪರಿಷತ್ ಸದಸ್ಯ ಧರ್ಮಸೇನ, ಸಂಸದ ಆರ್.ಧ್ರುವನಾರಾಯಣ ಭಾಗಿಯಾಗಿದ್ದರು.


ಸಂಬಂಧಿತ ಟ್ಯಾಗ್ಗಳು

C.H vijay shankar anil chikkamadu ಶಾಸಕ ಜೆಡಿಎಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ