ವಿದ್ಯಾರ್ಥಿಗಳ ದುಷ್ಕೃತ್ಯ: ಚಾಲಕನ ಮೇಲೆ ಹಲ್ಲೆ

group of students beaten ksrtc driver and conductor in mandya

06-02-2018

ಮಂಡ್ಯ: ರಾಜ್ಯ ಸಾರಿಗೆ ಸಂಸ್ಥೆಯ ಕರ್ತವ್ಯ ನಿರತ ಬಸ್ ಚಾಲಕ ಹಾಗು ನಿರ್ವಾಹಕನ ಮೇಲೆ ವಿದ್ಯಾರ್ಥಿಗಳ ಗುಂಪೊಂದು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಘಟನೆಯು ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಚೆನ್ನಾಪುರ ಗ್ರಾಮದ ಬಳಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಅನ್ನು ಏಕಾಏಕಿ ಅಡ್ಡಗಟ್ಟಿದ ವಿದ್ಯಾರ್ಥಿಗಳು, ಸುಮ್ಮನೆ ಗಲಾಟೆ ತೆಗೆದು ಚಾಲಕ ಮತ್ತು ನಿರ್ವಾಹನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. 7ಜನರ ವಿದ್ಯಾರ್ಥಿಗಳ ತಂಡ ಈ ದುಷ್ಕೃತ್ಯ ಎಸಗಿದ್ದಾರೆ. ಘಟನೆಯಿಂದ ಬಸ್ ಚಾಲಕ ಕುಮಾರ್ ಮತ್ತು ನಿರ್ವಾಹಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳಲ್ಲಿ ಗ್ರಾಮಸ್ಥರಿಗೆ ಇಬ್ಬರು ಸಿಕ್ಕಿಬಿದ್ದಿದ್ದು ಮನಬಂದಂತೆ ಥಳಿಸಿದ್ದಾರೆ. ವಿಷಯ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಸ್ಥಳಕ್ಕಾಗಮಿಸಿದ್ದು, 7ಜನ ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಗ್ರಾಮಸ್ಥರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಕೋಡಿಹಳ್ಳಿಯ ರಾಕೇಶ್ ಮತ್ತು ಅಂಚನಹಳ್ಳಿಯ ರಾಮು ಬಂಧಿತರು. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

KSRTC students ಅಡ್ಡಗಟ್ಟಿ ಗ್ರಾಮಸ್ಥ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ